
ಜೆಪಿ ತುಮಿನಾಡ್ ನಿರ್ದೇಶನ, ರಾಜ್ ಬಿ ಶೆಟ್ಟಿ ನಿರ್ಮಾಣದಲ್ಲಿ ಮೂಡಿ ಬಂದ ‘ಸು ಫ್ರಮ್ ಸೋ’ ಸಿನಿಮಾ ಜುಲೈ 25ರಂದು ರಿಲೀಸ್ ಆಗಿದ್ದು ಥಿಯೇಟರ್ ಬಳಿಕ ಒಟಿಟಿಯಲ್ಲಿ ರಿಲೀಸ್ ಆಗಿತ್ತು. ಇದೀಗ ಈ ಸಿನಿಮಾ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗಲಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಕಲರ್ಸ್ ಕನ್ನಡ ವಾಹಿನಿಯವರು ಸೋಶಿಯಲ್ ಮೀಡಿಯಾ ಖಾತೆ ಮೂಲಕ ಮಾಹಿತಿ ನೀಡಿ ಅಕ್ಟೋಬರ್ 12ರಂದು ಸಂಜೆ 6 ಗಂಟೆಗೆ ಪ್ರಸಾರ ಕಾಣಲಿದೆ ಎಂದು ತಿಳಿಸಿದ್ದಾರೆ.
ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದು ಥಿಯೇಟರ್ ಹಾಗೂ ಒಟಿಟಿಯಲ್ಲಿ ಸಿನಿಮಾ ವೀಕ್ಷಿಸಲು ಸಾಧ್ಯವಾಗದೆ ಇದ್ದವರು ಈಗ ಕುಟುಂಬದೊಂದಿಗೆ ಟಿವಿಯಲ್ಲಿ ಸಿನಿಮಾವನ್ನು ಮನೆಯಲ್ಲಿಯೇ ನೋಡಬಹುದಾಗಿದೆ.



















