
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023 ಹಾಗೂ 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದ್ದು ಈ ವೇಳೆ ಕಲಾವಿದರ ಮಾಸಾಶನವನ್ನು 3,000 ರೂ. ಗೆ ಏರಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ನಮ್ಮ ಸರ್ಕಾರ ನಿರಂತರವಾಗಿ ಕಲೆ, ಸಾಹಿತ್ಯರ ಸಂಸ್ಕೃತಿ, ರಂಗಭೂಮಿಯನ್ನು ಬೆಂಬಲಿಸಿಕೊಂಡು ಬಂದಿದ್ದು ನಾವು ಅಕಾಡೆಮಿಗಳಿಗೆ ಕೊಡುತ್ತಿದ್ದ ಅನುದಾನದ ಮೊತ್ತವನ್ನು ಬಿಜೆಪಿ ಸರ್ಕಾರವು ಕಡಿತಗೊಳಿಸಿದ್ದು ಇದೀಗ ಕಾಂಗ್ರೆಸ್ ಸರ್ಕಾರ ಮತ್ತೆ ಹೆಚ್ಚಿಸಿದೆ.
ಇದರ ಜೊತೆಗೆ ಕಲಾವಿದರ ಮಾಸಾಶನವನ್ನು 2500 ರೂಗಳಿಂದ 3000 ಗೆ ಹೆಚ್ಚಿಸಲಾಗುವುದು. ಬಿಜೆಪಿ ಸರ್ಕಾರವು ಕಲೆ ಸಂಸ್ಕೃತಿಗೆ ದ್ರೋಹ ಬಗೆದು ಪ್ರಶಸ್ತಿ ವಿತರಣೆ ನಿಲ್ಲಿಸಿತ್ತು. ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಯನ್ನು ಅದೇ ವರ್ಷವೇ ನೀಡಬೇಕು ಎಂದು ಸಿಎಂ ಸೂಚಿಸಿದರು.













