28.6 C
Udupi
Friday, November 22, 2024
spot_img
spot_img
HomeBlogಕಳ್ಳತನ ಆರೋಪಿಗಳನ್ನು ಬಂಧಿಸಿ ಕರೆತರುವ ವೇಳೆ ಪೊಲೀಸರ ಮೇಲೆ ದಾಳಿ , ಆರೋಪಿ ಪರಾರಿ…!

ಕಳ್ಳತನ ಆರೋಪಿಗಳನ್ನು ಬಂಧಿಸಿ ಕರೆತರುವ ವೇಳೆ ಪೊಲೀಸರ ಮೇಲೆ ದಾಳಿ , ಆರೋಪಿ ಪರಾರಿ…!

ಗದಗ: ಸರಣಿಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ನಾಲ್ವರು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾದ ಘಟನೆ ನಗರದ ಬೆಟಗೇರಿಯ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ಶುಕ್ರವಾರ ರಾತ್ರಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಜಯನಗರದಲ್ಲಿ ನಡೆದಿದ್ದ ಸರಣಿಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಜಾಡು ಹಿಡಿದು ನಗರಕ್ಕೆ ಆಗಮಿಸಿದ್ದ ಗಂಗಾವತಿ ಶಹರ ಪೊಲೀಸ್ ಠಾಣೆಯ ಪೊಲೀಸರು ಸ್ಥಳೀಯ ಎಸ್.ಎಂ. ಕೃಷ್ಣ ನಗರದಲ್ಲಿ ವಾಸವಿದ್ದ ಅಮ್ಜದ್ ಅಲಿ ಇರಾನಿ‌ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.

ಸರಣಿಗಳ್ಳತನ ಪ್ರಕರಣದ ಆರೋಪಿ ಅಮ್ಜದ್ ಅಲಿ ಇರಾನಿಯನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ಐದಾರು ಜನರು ತಗಾದೆ ತೆಗೆದಿದ್ದಾರೆ. ನಂತರ ಪೊಲೀಸರು ತಾವು ತಂದಿದ್ದ ಇನ್ನೋವಾ ಕಾರಿನಲ್ಲಿ ಆರೋಪಿಯನ್ನು ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಬೇಟಗೇರಿಯ ರೈಲ್ವೆ ಅಂಡರ್ ಬ್ರಿಡ್ಜ್ ನಲ್ಲಿ ಅಡ್ಡಗಟ್ಟಿ ಕಾರಿನ ಗಾಜು ಒಡೆದು ಮಾರಕಾಸ್ತ್ರಗಳಿಂದ ಮನಬಂದಂತೆ ಪೊಲೀಸರ ಮೇಲೆ ಹಲ್ಲೆ ನಡೆಸಿ, ಕಾರಿನಲ್ಲಿದ್ದ ಆರೋಪಿಯನ್ನು ಕರೆದುಕೊಂಡು ಪರಾರಿಯಾಗಿದ್ದಾರೆ.

ಗಾಯಗೊಂಡ ಪೊಲೀಸರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಕುರಿತು ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page