ಇಷ್ಟೊಂದು ನಿಷ್ಕ್ರೀಯ ಸರಕಾರದಿಂದ, ಶ್ವೇತಪತ್ರ ಹೊರಡಿಸುವಂತೆ ಆಗ್ರಹಿಸುವುದು ಎಷ್ಟು ಸರಿ…?
ಶಾಸಕ ವಿ.ಸುನೀಲ್ ಕುಮಾರ್ ಪ್ರಶ್ನೆ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತ ಬಂದು ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆಸಿಲ್ಲ. ಇದೊಂದು ಅಸಮರ್ಥ ಸರಕಾರ ಎಂದು ಶಾಸಕ ವಿ. ಸುನಿಲ್ ಕುಮಾರ್ ಸರಕಾರದ ಸಾಧನೆಯ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ನಾವು ಆಗ್ರಹಿಸುವುದಿಲ್ಲ ಎಂದು ಟೀಕಿಸಿದ್ದಾರೆ.ಇಂದು ಬೆಂಗಳೂರಿನಲ್ಲಿ ನಡೆದ ಚುನಾವಣಾ ಅವಲೋಕನ ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಯಕತ್ವಕ್ಕಾಗಿ 4 ರೀತಿಯ ಪೈಪೋಟಿ ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಕಂಡುಬರುತ್ತಿದೆ. ಸಿಎಂ ಸಿದ್ದರಾಮಯ್ಯ ವರುಣ ಕ್ಷೇತ್ರದಲ್ಲಿ ಮಾಡಿದ ಭಾಷಣ ಇದಕ್ಕೆ ಉದಾರಣೆಯಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅವರದೇ ಭಾರದಿಂದ ಕುಸಿದು ಬೀಳಲಿದೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಸರಕಾರ ಸಾಧನೆ ಇಲ್ಲದ ಖಾಲಿ ಹಾಳೇ ಸರಕಾರ ಸರಕಾರ ಈ ಒಂದು ವರ್ಷದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ನಡೆಸಿಲ್ಲ. ಇಂತಹ ಸರಕಾರದಿಂದ ಜನಾಂದೋಲನವೇ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ. ಇದಲ್ಲದೆ, ಲೋಕಸಭಾ ಚುನಾವಣೆಯ ಬಳಿಕ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಪತನವಾಗಲಿದೆ ಎಂದು ನೆರೆಯ ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ ಹೇಳಿಕೆ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಈ ಬಗ್ಗೆ ಪ್ರತಿಕ್ರಿಸಿದ ಸಿಎಂ ಆಪರೇಷನ್ ಕಮಲ ಬಿಜೆಪಿಯ ಹಗಲುಗನಸು, ಪಕ್ಷದ ಯಾವೊಬ್ಬ ಶಾಸಕರು ಅಂತಹ ಮಾರಾಟದ ಸರಕಾಗಲಾರರು ಎಂದು ತಿರುಗೇಟು ನೀಡಿದ್ದಾರೆ.