
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಯಾರೇ ಪಕ್ಷಕ್ಕೆ ಬಂದರೂ ಸ್ವಾಗತ ಎಂಬ ಹೇಳಿಕೆ ನೀಡುವ ಮೂಲಕ ಸಿಪಿ ಯೋಗೇಶ್ವರ್ ಪಕ್ಷಕ್ಕೆ ಬರುವ ಮುನ್ಸೂಚನೆ ಕೊಟ್ಟಿದ್ದಾರೆ.
ಚನ್ನಪಟ್ಟಣ ಕ್ಷೇತ್ರಕ್ಕೆ ಡಿಕೆ ಸುರೇಶ್ ಹೆಸರು ಕೂಡ ಇದ್ದು ನಮ್ಮ ಪಕ್ಷದ ಅಧ್ಯಕ್ಷರೇ ಅಲ್ಲಿ ಇರುವ ಕಾರಣ ಅವರೇ ಸೂಕ್ತ ಅಭ್ಯರ್ಥಿ ತೀರ್ಮಾನ ಮಾಡುತ್ತಾರೆ. ಒಳ್ಳೆಯ ಅಭ್ಯರ್ಥಿ ಹಾಕಬೇಕು ಎಂದು ಹೇಳಿದ್ದೇನೆ ಎಂದರು.
ಸಂಡೂರಿನಿಂದ ತುಕಾರಾಮ್ ಪತ್ನಿಗೆ ಟಿಕೆಟ್ ನೀಡುತ್ತೇವೆ. ಇಂದು ಚನ್ನಪಟ್ಟಣ ಮತ್ತು ಶಿಗ್ಗಾಂವಿ ಟಿಕೆಟ್ ವಿಚಾರ ತೀರ್ಮಾನ ಆಗುತ್ತೆ. ಸಂಜೆ ವೇಳೆಗೆ ಮೂರು ಕ್ಷೇತ್ರಗಳ ಟಿಕೆಟ್ ಘೋಷಣೆ ಆಗುತ್ತದೆ ಎಂದು ಮಾಹಿತಿ ನೀಡಿದರು.






















































