26 C
Udupi
Sunday, May 17, 2026
spot_img
spot_img
HomeBlogಕಾಕ೯ಳ: ಕಾನೂನು ಅರಿವು ಮಾಹಿತಿ ಕಾರ್ಯಕ್ರಮ

ಕಾಕ೯ಳ: ಕಾನೂನು ಅರಿವು ಮಾಹಿತಿ ಕಾರ್ಯಕ್ರಮ

ಕಾಕ೯ಳ: ‘ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ’ ಪ್ರಯುಕ್ತ ತಾಲೂಕು ಕಾನೂನು ಸೇವೆಗಳ ಸಮಿತಿ ಕಾಕ೯ಳ, ನ್ಯಾಯವಾದಿಗಳ ಸಂಘ ಕಾಕ೯ಳ, ಕಾರ್ಮಿಕ ಇಲಾಖೆ ಕಾಕ೯ಳ ಮತ್ತು ಸಾಣೂರಿನ ಬೆಸ್ಟ್ ಸೆಲ್ಲರ್ಸ್ ಅಪ್ಯಾರೆಲ್ಸ್ ಪ್ರೈವೇಟ್ ಲಿಮಿಟೆಡ್‌ (ಘಟಕ-2) ಆಶ್ರಯದಲ್ಲಿ ಕಂಪನಿಯ ಸಭಾಂಗಣದಲ್ಲಿ ಉಚಿತ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ ಆಯೋಜಿಸಿದ್ದು ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕ ನ್ಯಾಯವಾದಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ನ್ಯಾಯವಾದಿ ಪದ್ಮಪ್ರಸಾದ್ ಜೈನ್ “ದೇಶದ ಆರ್ಥಿಕ ಮತ್ತು ಕೈಗಾರಿಕಾ ಪ್ರಗತಿಯಲ್ಲಿ ಕಾರ್ಮಿಕರ ಪಾತ್ರ ಅತ್ಯಂತ ಅಮೂಲ್ಯವಾಗಿದೆ. ಶ್ರಮಿಕ ವರ್ಗವು ಸಮಾಜದ ಬೆನ್ನೆಲುಬಾಗಿದ್ದು, ಅವರ ಹಕ್ಕುಗಳ ರಕ್ಷಣೆ ಹಾಗೂ ಕಲ್ಯಾಣಕ್ಕೆ ಸರ್ಕಾರ ರೂಪಿಸಿರುವ ಕಾನೂನುಗಳ ಬಗ್ಗೆ ಪ್ರತಿಯೊಬ್ಬ ಕಾರ್ಮಿಕರೂ ಸೂಕ್ತ ಅರಿವು ಹೊಂದುವುದು ಅತ್ಯಗತ್ಯ” ಎಂದು ಹೇಳಿದರು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿನ್ಯಾಯವಾದಿಗಳ ಸಂಘ (ರಿ.) ಕಾರ್ಕಳ ಇದರ ಕೋಶಾಧಿಕಾರಿ ನ್ಯಾಯವಾದಿ ವಿನುಷಾ ಎಚ್. ಶೆಟ್ಟಿ ಅವರು ಭಾಗವಹಿಸಿದ್ದು ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಮತ್ತು ಕಾನೂನು ವಿಷಯಗಳ ಕುರಿತು ಸವಿಸ್ತಾರವಾಗಿ ಉಪನ್ಯಾಸ ನೀಡಿ ಕಾರ್ಮಿಕರಿಗಾಗಿ ಇರುವ ವಿವಿಧ ಕಾಯ್ದೆಗಳು, ಸುರಕ್ಷತಾ ನಿಯಮಗಳು, ಕಾನೂನು ಬದ್ಧ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಮಿಕ ನಿರೀಕ್ಷಕ ಸಿ.ಎಚ್. ನವೀನ್ ಕುಮಾರ್ ಮಾತನಾಡಿ, ಕಾರ್ಮಿಕರಿಗೆ ಸರ್ಕಾರದಿಂದ ಲಭ್ಯವಿರುವ ವಿಮೆ, ಭವಿಷ್ಯ ನಿಧಿ ಮತ್ತು ವಿವಿಧ ಕಲ್ಯಾಣ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಸ್ಟ್ ಸೆಲ್ಲರ್ಸ್ ಅಪ್ಯಾರೆಲ್ಸ್‌ನ ಮಾನವ ಸಂಪನ್ಮೂಲ ವ್ಯವಸ್ಥಾಪಕ ಸುಧೀರ್, ಸಂಸ್ಥೆಯ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದೆಂದು ತಿಳಿಸಿದರು. ಈ ವೇಳೆ ಉತ್ಪಾದನಾ ವ್ಯವಸ್ಥಾಪಕ ಸಂದೀಪ್ ಸೇರಿದಂತೆ ನೂರಾರು ಕಾರ್ಮಿಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page