
ವಿಜಯಪುರ: ಬೆಳಗಾವಿಯಲ್ಲಿ ಕಳೆದ ಮಂಗಳವಾರ 2ಎ ಮೀಸಲಾತಿಗೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪಂಚಮಸಾಲಿ ಲಿಂಗಾಯತ ಹೋರಾಟದ ವೇಳೆ ನಡೆದ ಲಾಠಿ ಚಾರ್ಜ್ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ ಅವರು ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ ಎಂದು ಹೇಳಿದ್ದಾರೆ.
ಅವರು ಕಲ್ಲು ಹೊಡೆಯದಿದ್ದರೆ 20 ಜನ ಪೊಲೀಸರಿಗೆ ಹೇಗೆ ಏಟು ಬಿತ್ತು? ಅವರು ಹೇಳಿದ್ದಕ್ಕೆ ಸಾಕ್ಷಿ ಇಲ್ಲ, ನನ್ನಲ್ಲಿ ‘ಎವಿಡೆನ್ಸ್’ ಇದೆ. ಪಂಚಮಸಾಲಿ ಹೋರಾಟದ ವಿಚಾರವಾಗಿ ಎರಡು ಬಾರಿ ಸಭೆ ಮಾಡಿದ್ದೇನೆ. ಹಿಂದುಳಿದ ವರ್ಗಗಳ ಜೊತೆ ಹೋಗಿ ಎಂದರೂ ಕೇಳಲಿಲ್ಲ. ಶಾಂತಿಯುತ ಚಳವಳಿಗೆ ಸಮ್ಮತಿಸಿದರೂ ಟ್ರ್ಯಾಕ್ಟರ್ ತರಲು ಮುಂದಾದರು. ಅವಕಾಶ ಕೊಡಲಿಲ್ಲ.ಕೋರ್ಟ್ ಕೂಡ ಶಾಂತ ಹೋರಾಟಕ್ಕೆ ಸೂಚಿಸಿದೆ. ಆದರೆ ಕಾನೂನು ಕೈಗೆ ತೆಗೆದುಕೊಳ್ಳುವ ಕೆಲಸ ಮಾಡಿ ಸಚಿವರಾದ ಮಹಾದೇವಪ್ಪ, ಸುಧಾಕರ, ವೆಂಕಟೇಶ ಮಾತುಕತೆಗೆ ಸಿಎಂ ಆಹ್ವಾನಿಸಿದರೆ ಬರಬೇಕು ಎಂದು ಹೇಳಿದರು.