
‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಅನಧಿಕೃತವಾಗಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕಾಪಿರೈಟ್ ಉಲ್ಲಂಘನೆ ಆರೋಪದಡಿ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬೆನ್ನಲ್ಲೇ ಈ ಕುರಿತು ರಕ್ಷಿತ್ ಶೆಟ್ಟಿ ನಿರ್ಮಾಣ ಸಂಸ್ಥೆ ಪ್ರತಿಕ್ರಿಯಿಸಿ ಈ ವಿಚಾರವಾಗಿ ನಮಗೆ ಈವರೆಗೂ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಎಂಆರ್‌ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ನ್ಯಾಯ ಎಲ್ಲಿದೆ ಚಿತ್ರದ ‘ನ್ಯಾಯ ಎಲ್ಲಿದೆ ಹಾಡು’ ಮತ್ತು ಗಾಳಿ ಮಾತು ಚಿತ್ರದ ‘ಒಮ್ಮೆ ನಿನ್ನನ್ನು’ ಅನಧಿಕೃತವಾಗಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ಪರಮ್ವಾ ಸ್ಟುಡಿಯೋಸ್ ಮತ್ತು ರಕ್ಷಿತ್ ಶೆಟ್ಟಿ ವಿರುದ್ಧ ದೂರು ದಾಖಲಿಸಿದ್ದಾರೆ.





