
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ 16ನೆಯ ರಾಷ್ಟ್ರೀಯ ಮತದಾರರ ದಿನಾಚರಣೆ 2026 ರ ಅಂಗವಾಗಿ ಮತದಾರರ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಈ ಸಂದರ್ಭದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳ ಮತದಾನವು ಎಷ್ಟು ಮಹತ್ವವಾದದ್ದು ಎಂಬ ಅರಿವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಉಪಸ್ಥಿತರಿದ್ದರು. ಕನ್ನಡ ಭಾಷಾ ಮುಖ್ಯಸ್ಥರಾದ ಶ್ರೀ ಶಿವಕುಮಾರ್ ಪ್ರತಿಜ್ಞಾವಿಧಿ ಬೋಧಿಸಿದರು. ಉಪನ್ಯಾಸಕ ವರ್ಗದವರು, ಬೋಧಕೇತರ ವರ್ಗದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



















