ಮನೆಗೆ ಭೇಟಿ ನೀಡಿ ಶುಭ ಹಾರೈಸಿದ ಕಾಂಗ್ರೆಸ್ ಮುಖಂಡ ಮುನಿಯಲು ಉದಯ್ ಶೆಟ್ಟಿ

ದಕ್ಷಿಣ ಆಫ್ರಿಕಾದಲ್ಲಿ ನಡೆದ ಏಷ್ಯಾ- ಪೆಸಿಫಿಕ್-ಆಫ್ರಿಕನ್ ಪವರ್ ಲಿಫ್ಟಿಂಗ್ ಮತ್ತು ಬೆಂಚ್‌ಪ್ರೆಸ್ ಚಾಂಪಿಯನ್‌ಷಿಪ್ ಸೀನಿಯರ್ಸ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನದ ಪದಕ ಪಡೆದು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದು ಕಾರ್ಕಳದ ಮುಕುಟಕ್ಕೆ ಹೆಮ್ಮೆಯ ಗರಿ ತಂದ ಅಕ್ಷತಾ ಪೂಜಾರಿ ಅವರ ಮನೆಗೆ ಕಾಂಗ್ರೆಸ್ ಮುಖಂಡರಾದ ಮುನಿಯಲು ಉದಯ್ ಶೆಟ್ಟಿ ಭೇಟಿ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.





