
ಕಾರ್ಕಳ: ದಿನಾಂಕ 17.4.2026ನೇ ಶುಕ್ರವಾರದಂದು ಕಾರ್ಕಳದ ಉಚ್ಚಂಗಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯಿಂದ 3ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.
ಬೆಳಗ್ಗೆ 9:30ಕ್ಕೆ ವೇದಮೂರ್ತಿ ಶ್ರೀ ಸುದೇಶ್ ಭಟ್ ಕಾಬೆಟ್ಟು ಇವರ ಪೌರೋಹಿತ್ಯದಲ್ಲಿ ಸತ್ಯನಾರಾಯಣ ಪೂಜೆ ನೆರವೇರಲಿದ್ದು 11:30ಕ್ಕೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ರಾಘವೇಂದ್ರ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು ಮಧ್ಯಾಹ್ನ 1:00ಗೆ ಮಹಾ ಅನ್ನಸಂತರ್ಪಣೆ ಹಾಗೂ ರಾತ್ರಿ 7 ರಿಂದ ಮನೋರಂಜನ ಕಾರ್ಯಕ್ರಮಗಳು ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಭಕ್ತಾಭಿಮಾನಿಗಳು ತನು-ಮನ-ಧನ ಗಳಿಂದ ಸಹಕರಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಆಹ್ವಾನಿಸಲಾಗಿದೆ.











