
ಕಾರ್ಕಳ: ತಾಲೂಕಿನ ಸೂಡದ ಓರಿಯಂಟಲ್ ಕ್ರಷರ್ನ ಮಾಲೀಕರಾಗಿದ್ದ ಸಿ.ಎಂ. ಜಾಯ್ (78) ಅವರು ಶನಿವಾರ ನಿಧನರಾದರು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.











































