
ಕಾರ್ಕಳ: ಕಬ್ಬಡಿ ಆಟಗಾರ ಮುಟ್ಲುಪಾಡಿ ನಡುಮನೆ ಪ್ರೀತಂ ಶೆಟ್ಟಿ (26) ಹೃದಯಾಘಾತದಿಂದ ನಿನ್ನೆ ರಾತ್ರಿ ನಿಧನರಾಗಿದ್ದಾರೆ.
ಇವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕಬ್ಬಡಿ ಪಂದ್ಯಾಟದಲ್ಲಿ ಭಾಗವಹಿಸಿದ್ದು ಆ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.