
ಕಾರ್ಕಳ : ಕಲ್ಯಾ ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ಪುತ್ರನ್ (46 ವ)ಎಂಬ ವ್ಯಕ್ತಿಯು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಬೆದರಿಕೆ ಹಾಕಿದ ಆರೋಪದಲ್ಲಿ ಆತನ ವಿರುದ್ಧ ಬಾಲಕೀಯ ಪೋಷಕರು ಪೋಕ್ಸೋ ಮತ್ತು ದಲಿತ ದೌರ್ಜನ್ಯ ಕಾಯಿದೆಯಡಿ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ . ಡಿವೈಎಸ್ಪಿ ಅರವಿಂದ ಕಲಗುಜ್ಜಿ ನೇತೃತ್ವದಲ್ಲಿ ಪೊಲೀಸರು ಆರೋಪಿ ಸಂತೋಷ್ ಪುತ್ರನ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.