
ರಾಜೀವ್ ಗಾಂಧಿ ಆಧುನಿಕ ಭಾರತದ ರುವಾರಿಯಾಗಿದ್ದರು, ದೇಶದ ಸರ್ವಾಂಗಿಣ ಅಭಿವೃದ್ಧಿಯು ಗ್ರಾಮೀಣ ಅಭಿವೃದ್ಧಿಯನ್ನು ಅವಲಂಬಿಸಿದೆ ಆ ನೆಲೆಯಲ್ಲಿ ಒಬ್ಬ ಪ್ರದಾನಿಯಾಗಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿ ತಂದು ಗ್ರಾಮೀಣ ಮಟ್ಟದ ಬಡ ವರ್ಗದ ಜನರಿಗೆ ಆಡಳಿತ ನಡೆಸುವ ಅದಿಕಾರವನ್ನು ಕೊಟ್ಟವರು ರಾಜೀವ್ ಗಾಂಧಿಯವರು, ಇದು ಪ್ರಜಾತಂತ್ರ ವ್ಯವಸ್ಥೆಯ ಮಾಹಾ ಕ್ರಾಂತಿಗೆ ನಾಂದಿ ಹಾಡಿತ್ತು, ಭಾರತ ಇಂದು ವಿಶ್ವದ ಆಧುನಿಕ ತಂತ್ರಜ್ಞಾನವನ್ನು ಹೊಂದಿರುವ ಅಭಿವೃದ್ಧಿಶೀಲ ರಾಷ್ಟ್ರವಾಗುವಲ್ಲಿ ರಾಜೀವ್ ಗಾಂಧಿಯವರ ಆಡಳಿತಾತ್ಮಕ ದೂರದೃಷ್ಟಿತ್ವವೇ ಕಾರಣವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಕೀಲರಾದ ಶೇಖರ್ ಮಡಿವಾಳ್ ಅಭಿಪ್ರಾಯ ಪಟ್ಡರು ಅವರು ಇಂದು ಕಾರ್ಕಳ ಕಾಂಗ್ರೆಸ್ ಕಛೇರಿಯಲ್ಲಿ ಭಾರತ ರತ್ನ ದಿ. ರಾಜೀವ್ ಗಾಂದಿಯವರ 35 ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅದ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಶುಭದರಾವ್ ಮಾತನಾಡಿ 18 ವರ್ಷದ ಯುವ ವರ್ಗಕ್ಕೆ ಮತದಾನದ ಅಧಿಕಾರವನ್ನು ನೀಡಿ ಯುವಕರು ದೇಶದ ರಾಜಕೀಯ ವ್ಯವಸ್ಥೆಯ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಳ್ಳಲು ಅವಕಾಶ ಮಾಡಿಕ್ಕೊಟ್ಟರು, ಬೊಪೋರ್ಸ್ ಎಂಬ ಸುಳ್ಳು ಹಗರಣವನ್ನು ಮುಂದಿಟ್ಟು ಅವರ ತೇಜೋವಧೆಯನ್ನು ಮಾಡಿದರೂ ಅದನ್ನು ಸವಾಲಾಗಿ ಸ್ವೀಕರಿಸಿ ದೇಶದ ಅಖಂಡತೆ ಮತ್ತು ಸೈದಾಂತಿಕ ಬದ್ದತೆಗಾಗಿ ತನ್ನ ಪ್ರಾಣವನ್ನೇ ಮುಡಿಪಾಗಿಟ್ಟು ಹುತಾತ್ಮರಾದರು. ವರ್ತಮಾನದ ರಾಜಕೀಯ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬ ಭಾರತೀಯರ ಮನಸ್ಸಿನಲ್ಲಿಯು ಅವರ ನೆನಪು ಅಚ್ಚಳಿಯದೆ ಉಳಿದಿದ್ದು ಅವರು ಸಾಧಿಸಿದ ಸಾಧನೆಯ ಮಾರ್ಗಗಳು ಚಿರಸ್ಮರಣೀಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಸದಾಶಿವ ದೇವಾಡಿಗ, ಹಿರ್ಗಾನ ಸೊಸೈಟಿ ಅಧ್ಯಕ್ಷ ಸೀರಿಯಣ್ಣ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಭಾನು ಭಾಸ್ಕರ್ ಪೂಜಾರಿ, ಹಿರಿಯ ಕಾಂಗ್ರೆಸ್ ನಾಯಕರಾದ ಪ್ರಭಾಕರ್ ಬಂಗೇರ, ಭೂನ್ಯಾಯ ಮಂಡಳಿ ಸದಸ್ಯ ಸುನಿಲ್ ಭಂಡಾರಿ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ರೀನಾ ಡಿಸೋಜಾ, ಆಶಾ ಬೈಲೂರ್, ಸಂತೋಷ ದೇವಾಡಿಗ ಬೋಳ, ದೀಪಕ್ ಶೆಟ್ಟಿ ದೊಂಡೆರಂಗಡಿ ಮೊದಲಾದವರು ಉಪಸ್ಥಿತರಿದ್ದರು. ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿ ಬ್ಲಾಕ್ ಉಪಾಧ್ಯಕ್ಷರಾದ ಜಾರ್ಜ್ ಕಾಸ್ಟಲಿನ್ ಧನ್ಯವಾದವಿತ್ತರು.



























