ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ ವಿ. ಸುನಿಲ್ ಕುಮಾರ್

ಕಾರ್ಕಳ ವಿಧಾನಸಭಾ ಕ್ಷೇತ್ರದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಾಜಿ ಸಚಿವರು, ಶಾಸಕರಾದ ವಿ.ಸುನಿಲ್ ಕುಮಾರ್ ಇಂದು ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ರವರನ್ನು ಭೇಟಿಯಾಗಿದ್ದರು.
ಕಾರ್ಕಳದ ಐತಿಹಾಸಿಕ ರಾಮಸಮುದ್ರ ಮತ್ತು ವರಂಗ ಚತುರ್ಮುಖ ಕೆರೆ ಬಸದಿಯ ಕುರಿತು ಕೇಂದ್ರ ಪ್ರವಾಸೋದ್ಯಮ ಸಚಿವರನ್ನು ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿಯ ಕುರಿತು ಚರ್ಚೆ ನಡೆಸಿ ಮನವಿ ಸಲ್ಲಿಸಿದರು.