ಸರಕಾರದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ, ಕರೆ ನೀಡಿದ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು

ಕಾರ್ಕಳ ತಾಲೂಕು ಪಂಚಾಯತ್ ಕಟ್ಟಡದಲ್ಲಿ ನಡೆದ ಕಾರ್ಕಳ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ ಹಾಗೂ ಅಧ್ಯಕ್ಷ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಉಡುಪಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾದ್ಯಕ್ಷರಾದ ಉದಯ ಶೆಟ್ಟಿ ಮುನಿಯಾಲು ಅವರು ಭಾಗವಹಿಸಿದರು.
ಕಛೇರಿ ಉದ್ಘಾಟನೆಯ ಬಳಿಕ ತಾಲ್ಲೂಕು ಪಂಚಾಯತ್ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ ರಾಜ್ಯ ಸರ್ಕಾರದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಎಲ್ಲರೂ ಶ್ರಮಿಸುವಂತೆ ಕರೆ ನೀಡಿದರು. ನೂತನ ಅಧ್ಯಕ್ಷರಾದ ಅಜಿತ್ ಹೆಗ್ಡೆ ಮಾಳ ಹಾಗೂ ಎಲ್ಲಾ ಸದಸ್ಯರಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹಾಗೂ ತಾಲೂಕು ದಂಡಾಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಹಾಗೂ ಸಂಬಂದಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಆರಂಭದ ಮುನ್ನ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಕಾರ್ಕಳ ಬ್ಲಾಕ್ ಅಧ್ಯಕ್ಷರಾದ ಶುಭದ್ ರಾವ್ ಉಪಸ್ಥಿತಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು, ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು. ಸಭೆಯ ಬಳಿಕ ಎಲ್ಲಾ ನಾಯಕರು, ಪದಾಧಿಕಾರಿಗಳು, ಗ್ಯಾರಂಟಿ ಸಮಿತಿಯ ಅಧ್ಯಕ್ಷ ಸದಸ್ಯರುಗಳು ಪಾದಯಾತ್ರೆಯ ಮೂಲಕ ಉದ್ಘಾಟನೆಗೊಳ್ಳಲಿರುವ ಕಛೇರಿ ಪ್ರಾಂಗಣಕ್ಕೆ ತಲುಪಿದರು.