
ಕಾರ್ಕಳ : ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ನ.18 ರಂದು ಯಶಸ್ವಿಯಾಗಿ ನಡೆಯಿತು. ಕ್ರೀಡಾಕೂಟದ ಮೊದಲ ಹಂತವಾಗಿ ವಿದ್ಯಾರ್ಥಿಗಳಿಂದ ಆಕರ್ಷಕ, ಶಿಸ್ತು ಬದ್ಧ ಪಥಸಂಚಲನ ಕ್ರೀಡಾಕೂಟಕ್ಕೆ ಮತ್ತಷ್ಟು ಮೆರುಗನ್ನು ನೀಡಿತು. ಜೊತೆಗೆ ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು.
ಕ್ರೀಡಾಕೂಟಕ್ಕೆ ಮುಖ್ಯ ಅತಿಥಿಯಾಗೆ ಆಗಮಿಸಿರುವ ತಾಲೂಕು ದೈಹಿಕ ಶಿಕ್ಷಣ ಆಧಿಕಾರಿಯಾದ ರವಿಚಂದ್ರ ಕಾರಂತ್ ಹಾಗೂ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಸಿ.ಇ.ಒ ಮತ್ತು ಪ್ರಾಂಶುಪಾಲರಾಗಿರುವ ದಿನೇಶ್ ಎಂ. ಕೊಡವೂರು ಬಲೂನುಗಳ ಗೊಂಚಲನ್ನು ಆಕಾಶಕ್ಕೆ ಸಾಂಕೇತಿಕವಾಗಿ ತೇಲಿ ಬಿಡುವ ಮೂಲಕ ಹಾಗೂ ಶಾಲೆಯ ರಾಷ್ಟ್ರ ಮತ್ತು ರಾಜ್ಯಮಟ್ಟದ ಕ್ರೀಡಾಪಟುಗಳಿಂದ ಕ್ರೀಡಾ ಜ್ಯೋತಿಯನ್ನು ಬೆಳಗಿಸುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.
ಕ್ರೀಡಾಕೂಟದ ಮುಖ್ಯ ಅತಿಥಿಯಾಗಿ ಆಗಮಿಸಿದ ರವಿಚಂದ್ರ ಕಾರಂತ್ ಜ್ಞಾನಸುಧಾವು ಓದಿನ ಜೊತೆಗೆ ಶಿಸ್ತಿಗೆ ಬಹಳ ಪ್ರಾಧನ್ಯತೆ ನೀಡುತ್ತದೆ ಹಾಗೂ ಕ್ರೀಡೆಗೂ ಕೂಡ ಪ್ರಾಮುಖ್ಯತೆಯನ್ನು ನೀಡುತ್ತದೆ ಎನ್ನುವುದಕ್ಕೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ವಿದ್ಯಾರ್ಥಿಗಳು ಪ್ರತಿನಿಧಿಸುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಸಿ.ಇ.ಒ ಮತ್ತು ಪ್ರಾಂಶುಪಾಲರಾಗಿರುವ ದಿನೇಶ್ ಎಂ. ಕೊಡವೂರುರವರು ಜೀವನದಲ್ಲಿ ಸೋಲು ಗೆಲುವು ಎಂಬುದು ಸಾಮಾನ್ಯ. ಸೋಲಿನ ನಂತರವೂ ಗೆಲುವಿನ ಉತ್ಸಾಹ ಜೀವಂತವಾಗಿರಲಿ. ಪ್ರತಿಯೊಬ್ಬರು ಕೂಡ ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಯೋಗಾಸನ ಮತ್ತು ಈಜು ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಕುಮಾರಿ ಅನ್ವಿ ಎಚ್ ಅಂಚನ್ ಹಾಗೂ ಕುಮಾರಿ ಭೂಮಿ ಇವರಿಗೆ ಸನ್ಮಾನಿಸಲಾಯಿತು.
ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಟ್ರಸ್ಟಿಗಳಾದ ಅನಿಲ್ ಕುಮಾರ್ ಜೈನ್, ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಉಪಪ್ರಾಂಶುಪಾಲರಾದ ವಾಣಿ.ಕೆ, ಉದ್ಯಮಿಗಳಾದ ದೇವೆಂದ್ರ ನಾಯಕ್, ತ್ರಿವಿಕ್ರಮ ಕಿಣಿ, ಅಕಾಡೆಮಿಕ್ ಅಡ್ವೈಸರ್ ಶಾರದ ಅಂಬರೀಶ್, ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಸಾಹಿತ್ಯ,ಸಾರ್ವಜನಿಕ ಸಂಪರ್ಕಾಧಿಕಾರಿಯಾದ ಜ್ಯೋತಿ ಪದ್ಮನಾಭ್ ಭಂಡಿ, ಡೀನ್ ಅಕಾಡೆಮಿಕ್ಸ್ ಡಾ. ಮಿಥುನ್ ಯು., ಡೀನ್ ಸ್ಟುಡೆಂಟ್ಸ್ ಅಫೇರ್ ಶಕುಂತಳಾ ಎಮ್ ಸುವರ್ಣ, ದೈಹಿಕ ಶಿಕ್ಷಣ ನಿರ್ದೇಶಕರಾದ ಅರುಣ್ ಕುಮಾರ್, ಸೌಜನ್ಯ ಹೆಗ್ಡೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಕಿರಣ್ ಇವರುಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಆಂಗ್ಲ ಭಾಷಾ ಉಪನ್ಯಾಸಕಿ ಕು. ದರ್ಶಿನಿ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ರೇಷ್ಮಾ ಸಲಿಸ್ ವಂದಿಸಿದರು.



















