
ಕಾರ್ಕಳ :ಬಿಜೆಪಿ ಮಂಡಲ ಮಹಿಳಾ ಮೋರ್ಚಾದ ಕಾರ್ಯಕರ್ತರ ಸಭೆಯು ಮಂಜುನಾಥ ಪೈ ಸಭಾಂಗಣದಲ್ಲಿ ಇಂದು (ಎ23) ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಸುನಿಲ್ ಕುಮಾರ್ ಸಿದ್ದರಾಮಯ್ಯ ಒಂದು ಸುಳ್ಳನ್ನು ಹತ್ತು ಬಾರಿ ಹೇಳಿ ಅದನ್ನು ಸತ್ಯ ಮಾಡುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದಾರೆ.ಅವರು ನಾನು 5 ಕೆಜಿ ಅಕ್ಕಿ ಕೊಟ್ಟಿದ್ದೇನೆಂದು ಹೇಳುತ್ತಾ ಬರುತ್ತಿದಾರೆ ಆದರೆ ಅದನ್ನು ನರೇಂದ್ರ ಮೋದಿ ಸರಕಾರ ಕರ್ನಾಟಕಕ್ಕೆ ಕಳಿಸುತ್ತಿದೆ ಎಂದು ಅಪ್ಪಿ ತಪ್ಪಿಯೂ ಕೂಡ ಒಂದು ಬಾರಿಯೂ ಅವರು ಹೇಳಲಿಲ್ಲ. ಈ ವಿಷಯವನ್ನು ನಾವು ಹೇಳಿದ ಮೇಲೆ ಜನರಿಗೆ ನಿಧಾನವಾಗಿ ಅರ್ಥವಾಗುತ್ತಿದೆ ಎಂದರು.ಈ ಚುನಾವಣೆ ಸ್ಥಳೀಯ ವಿಷಯಕ್ಕೆ ನಡೆಯುತ್ತಿರುವ ಚುನಾವಣೆಯಲ್ಲ ಇದು ದೇಶದ ಭವಿಷ್ಯವನ್ನು ನಿರ್ಧಾರ ಮಾಡುವ ಚುನಾವಣೆ. ಸ್ಥಳೀಯ ಸಮಸ್ಯೆಗಳಿಗೆ ಪ್ರಾಮುಖ್ಯತೆ ನೀಡದೆ ಈ ದೇಶಕ್ಕೆ ಸಮರ್ಥವಾದ ನೇತೃತ್ವ ನರೇಂದ್ರ ಮೋದಿಯವರಿಂದ ಮಾತ್ರ ಸಾಧ್ಯ ಎಂಬುದನ್ನು ನಾವು ಅರ್ಥಮಾಡಿ ಕೊಳ್ಳಬೇಕಾಗಿದೆ ಎಂದರು.
ಚುನಾವಣಾ ಮಹಿಳಾ ಉಸ್ತುವಾರಿ ಶ್ಯಾಮಲ ಕುಂದರ್ ಮಾತನಾಡಿ ಎಲ್ಲಾ ಕ್ಷೇತ್ರದಲ್ಲಿ ಮಹಿಳಾ ಪರ ಯೋಜನೆಯನ್ನು ತಂದಂತಹ ಪ್ರಧಾನಿ ನರೇಂದ್ರ ಮೋದಿ ಅವರು ಯಾವತ್ತು ಜಾತಿಯನ್ನು ನೋಡಲಿಲ್ಲ ಸಬ್ ಕ ಸಾತ್ ಸಬ್ ಕ ವಿಕಾಸ್ ಎಂಬ ದ್ಯೇಯ ವಾಕ್ಯದೊಂದಿಗೆ ಜನರಿಗೆ ಸೌಲಭ್ಯವನ್ನು ನೀಡುವ ಸಂದರ್ಭದಲ್ಲಿ ಒಂದು ಜನಾಂಗಕ್ಕೆ ಸೀಮಿತವಾಗಿ ನೀಡದೆ ಎಲ್ಲರ ವಿಕಾಸ ಆಗಬೇಕು ಎಂದು ಕೆಲಸ ಮಾಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಾರ್ಕಳ ಮಂಡಲದ ಕ್ಷೇತ್ರಧ್ಯಕ್ಷರಾದ ನವೀನ್ ನಾಯಕ್, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರು ಮಾಲಿನಿ ಜೆ ಶೆಟ್ಟಿ ಕಾರ್ಕಳ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವಿನಯ ಡಿ. ಬಂಗೇರ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸಂಧ್ಯಾ ರಮೇಶ್, ರಾಷ್ಟ್ರೀಯ ಮಹಿಳಾ ಚುನಾವಣಾ ಉಸ್ತುವಾರಿ ಶ್ಯಾಮಲಾ ಕುಂದರ್, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಸುಗಂಧಿ ನಾಯಕ್ ಹಾಗೂ ಕವಿತಾ ಹರೀಶ್,ಬಿಜೆಪಿಯ ಪ್ರಮುಖರಾದ ಮಹೇಶ್ ಶೆಟ್ಟಿ ಕುಡುಪುಲಾಜೆ, ಮಹಾವೀರ ಹೆಗ್ಡೆ, ಉದಯ ಕೋಟ್ಯಾನ್ ಕೆ. ಪಿ ಶೆಣೈ ಹಾಗೂ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು ನಗರ ಮಹಿಳಾ ಮೋರ್ಚಾದ ಅಧ್ಯಕ್ಷರು ಮಮತ ಸುವರ್ಣ ಪ್ರಾರ್ಥನೆ ಮಾಡಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಮಾಲಿನಿ ಜೆ ಶೆಟ್ಟಿ ಸ್ವಾಗತಿಸಿ ತಾಲೂಕು ಮಹಿಳಾ ಮೋರ್ಚಾದ ಕೋಶಾಧಿಕಾರಿ ಸುಮಾ ರವಿಕಾಂತ್ ಕಾರ್ಯಕ್ರಮವನ್ನು ನಿರೂಪಿಸಿದರು

