
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಕಾರ್ಕಳ ಇದರ ವಾರ್ಷಿಕ ಮಹಾಸಭೆಯು ಶ್ರೀಮದ್ಭವನೇಂದ್ರ ಪ್ರೌಢಶಾಲೆ ಕಾರ್ಕಳ ಇಲ್ಲಿ ಜರುಗಿತು ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಎಂಕೆ ವಿಜಯಕುಮಾರ್ ಅವರು ವಹಿಸಿದ್ದರು. ವೇದಿಕೆಯಲ್ಲಿ ಉಡುಪಿ ಜಿಲ್ಲಾ ಗೈಡ್ ಕಮಿಷನರ್ ಜ್ಯೋತಿ ಜೆ ಪೈ ಜಿಲ್ಲಾ ಕಾರ್ಯದರ್ಶಿ ಆನಂದ ಅಡಿಗ ರಾಜ್ಯ ಸಹ ಸಂಘಟಕ ಸುಮನ ಶೇಖರ್ ಜಿಲ್ಲಾ ಸಹಾಯಕ ಆಯುಕ್ತೆ ರಮಿತಾ ಶೈಲೇಂದ್ರ ಕಾರ್ಕಳ ಸ್ಥಳಿಯ ಸಂಸ್ಥೆಯ ಉಪಾಧ್ಯಕ್ಷ ಜಗದೀಶ್ ಹೆಗ್ಡೆ, ಸಾವಿತ್ರಿ ಮನೋಹರ್, ಕೋಶಾಧಿಕಾರಿ ಬಿ ಸತೀಶ್ ಶೆಟ್ಟಿ, ಭುವನೇಂದ್ರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಆರ್ ನಾರಾಯಣ ಶೆಣೈ ,ಸ್ಥಳೀಯ ಸಂಸ್ಥೆಯ ಜಿಲ್ಲಾ ಸಹಾಯಕ ಆಯುಕ್ತರಾದ ವೃಂದ ಹರಿಪ್ರಕಾಶ್ ಶೆಟ್ಟಿ , ಬೋಳ ಗೀತಾ ಸುಧೀರ್ ಕಾಮತ್ , ವಿದ್ಯಾಕಿಣಿ , ಶ್ವೇತಾ ಕಾಮತ್, ಹಿರಿಯ ಸ್ಕೌಟರ್ ಗಳಾದ ಎಚ್ ನವೀನ್ ಕುಮಾರ್, ಆನಂದ ಪೂಜಾರಿ, ನರೇಂದ್ರ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಮೊದಲಿಗೆ ಸ್ಕೌಟ್ಸ್ ಗೈಡ್ಸ್ ಪ್ರಾರ್ಥನೆಯನ್ನು ಸಾಮೂಹಿಕವಾಗಿ ಹಾಡಲಾಯಿತು, ಬಳಿಕ ಸ್ಥಳೀಯ ಸಂಸ್ಥೆಯ ಸಹ ಕಾರ್ಯದರ್ಶಿ ಸೀಮಾ ಕಾಮತ್ ರವರು ಎಲ್ಲರನ್ನು ಸ್ವಾಗತಿಸಿದರು ನಂತರ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಜಾಲ್ಸೂರುರವರು ಕಳೆದ ಸ್ಕೌಟ್ ಗೈಡ್ಸ್ ಕಾರ್ಯ ಚಟುವಟಿಕೆಗಳ ವರದಿಯನ್ನು ವಾಚಿಸಿದರು. ಬಳಿಕ ವಾರ್ಷಿಕ ಲೆಕ್ಕಪತ್ರವನ್ನು ಕೋಶಾಧಿಕಾರಿ ಬಿ ಸತೀಶ್ ಶೆಟ್ಟಿ ಸಭೆಯಲ್ಲಿ ಮಂಡಿಸಿದರು. ನಂತರ ಈ ವರ್ಷದ ಶೈಕ್ಷಣಿಕ ಕಾರ್ಯ ಚಟುವಟಿಕೆಯ ಬಗ್ಗೆ ರಾಜ್ಯ ಸಹ ಸಂಘಟಕರಾದ ಸುಮನ ಶೇಖರ್ ರವರು ತಿಳಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ಸಂಸ್ಥೆ ಪ್ರಕಟಿಸಿದ ಈ ವರ್ಷದ ಸ್ಕೌಟ್ಸ್ ಗೈಡ್ಸ್ ಚಟುವಟಿಕೆಗಳ ಮಾಹಿತಿಗಳನ್ನೊಳಗೊಂಡ ಪುಸ್ತಕವನ್ನು ಸ್ಥಳೀಯ ಸಂಸ್ಥೆ ಅಧ್ಯಕ್ಷ ಎಂ ಕೆ ವಿಜಯ ಕುಮಾರ್ ರವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ನಂತರ ಬನ್ನಿಸ್ ಕಬ್ ಬುಲ್ ಬುಲ್ ಸ್ಕೌಟ್ ಗೈಡ್ ಶಿಕ್ಷಕರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು. ನಂತರ ಹಿರಿಯ ಸ್ಕೌಟರ್ ಶ್ರೀ ಆನಂದ ಪೂಜಾರಿ ಧನ್ಯವಾದವಿತ್ತರು.ಜಿಲ್ಲಾ ಕಾರ್ಯದರ್ಶಿ ಆನಂದ ಅಡಿಗರವರು ಶಿಕ್ಷಕರ ಪುನಶ್ಚೇತನ ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಕಾರ್ಕಳ ತಾಲೂಕಿನ ಬನ್ನಿಸ್ ಕಬ್ ಬುಲ್ ಬುಲ್ ಸ್ಕೌಟ್ಸ್ ಗೈಡ್ಸ್ ಶಿಕ್ಷಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ಸು ಗೊಳಿಸಿದರು. ಜಿಲ್ಲಾ ಸಹಾಯಕ ಆಯುಕ್ತೆ ವೃಂದಾ ಹರಿಪ್ರಕಾಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.