
ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿರುವ ಡಾ. ಮಂಜುನಾಥ್ ಕೋಟ್ಯಾನ್ ಅವರು ಕರ್ನಾಟಕ ರಾಜ್ಯ ಮಹಾ ವಿದ್ಯಾಲಯ ಶಿಕ್ಷಕರ ಸಂಘದ ಮಂಗಳೂರು ವಿಶ್ವ ವಿದ್ಯಾಲಯದ ಅಧ್ಯಾಪಕ ಭೂಷಣ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಮಡಿಕೇರಿ ಜಿಲ್ಲೆ ಗಳ ಸಾಧಕ ಪ್ರಾದ್ಯಾ ಪಕಾರ ಶೈಕ್ಷಣಿಕ ಸಾಧನೆ ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತದೆ. ನ್ಯಾಕ್ ಇದರ ಅಧ್ಯಕ್ಷರಾದ ಪ್ರೊ ಅನಿಲ್ ಸಹಸ್ರ ಬುದ್ಯೆ ಇವರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದ್ದು ಹಲವಾರು ವಿಭಾಗಗಳಿಗೆ ಪ್ರಶಸ್ತಿ ಘೋಷಣೆ ಮಾಡಿರುವ ಈ ಘಟಕವು ಸೆ. 15 ರಂದು ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.













