ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಶೆಟ್ಟಿ ಆಗ್ರಹ

ಕಾರ್ಕಳದಲ್ಲಿ ನಿನ್ನೆ ಮಧ್ಯಾಹ್ನ ನಡೆದ ಅತ್ಯಾಚಾರ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರು ಇದ್ದರೂ ಅವರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ ಎಂದು ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಶೆಟ್ಟಿ ಆಗ್ರಹಿಸಿದ್ದಾರೆ.
ಮಹಿಳೆಯ ಮೇಲೆ ಅತ್ಯಾಚಾರ ಮಾಡುವ ಪೈಶಾಚಿಕ ಮನಸ್ಥಿತಿ ಈ ಸಮಾಜಕ್ಕೆ ಕಂಟಕವಾದುದು. ಇದನ್ನು ಯಾರು ಕೂಡ ಸಹಿಸಲು ಸಾಧ್ಯ ಇಲ್ಲ.
ಈ ಘಟನೆಯಲ್ಲಿ ಕಟ್ಟು ನಿಟ್ಟಿನ ಕ್ರಮ ಕೈ ಗೊಳ್ಳುವಂತೆ ಗೃಹ ಸಚಿವರಲ್ಲಿ ಮಾತನಾಡಿದ್ದೇನೆ. ಯಾವುದೇ ಕಾರಣಕ್ಕೂ ಅತ್ಯಾಚಾರಿಗಳನ್ನು ತಪ್ಪಿಸೋಕೆ ಬಿಡವುದಿಲ್ಲ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.













