
ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ (ಸಂಚಾರಿ ಪೀಠ ಕಾರ್ಕಳ)
ಶ್ರೀ ದಿನೇಶ್ ಹೆಗ್ಡೆ ಇವರು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದು ಆ ಪ್ರಯುಕ್ತ ಅವರಿಗೆ ಕಾರ್ಕಳ ವಕೀಲರ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಕಾರ್ಕಳ ವಕೀಲರ ಸಂಘದಲ್ಲಿ ದಿನಾಂಕ:18-06-2024ರಂದು ಆಯೋಜಿಸಲಾಯಿತು.
ಕಾರ್ಯಕ್ರವನ್ನು ಉದ್ದೇಶಿಸಿ ಹಿರಿಯ ವಕೀಲರಾದ ಎಮ್. ಕೆ. ವಿಜಯ್ ಕುಮಾರ್, ಸರಕಾರಿ ಅಭಿಯೋಜಕರಾದ ಪ್ರಕಾಶ್ಚಂದ್ರ ಶೆಟ್ಟಿ, ಕಾರ್ಕಳ ವಕೀಲರ ಸಂಘದ ಅಧ್ಯಕ್ಷರಾದ ಸುನಿಲ್ ಕುಮಾರ್ ಶೆಟ್ಟಿ ಹಾಗೂ ಸನ್ಮಾನಿತಗೊಂಡ ಗೌರವಾನ್ವಿತ ನ್ಯಾಯಾಧೀಶರಾದ
ಶ್ರೀ ದಿನೇಶ್ ಹೆಗ್ಡೆಯವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶರ್ಮಿಳಾ ಸಿ.ಎಸ್, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೋಮಲ ಆರ್. ಸಿ, ವಕೀಲರ ಸಂಘದ ಅಧ್ಯಕ್ಷರಾದ ಸುನಿಲ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ಕೆ. ಹರೀಶ್ ಅಧಿಕಾರಿ, ಸಹಾಯಕ ಸರಕಾರಿ ಅಭಿಯೋಜಕರಾದ ಸೀತಾ ಹಾಗೂ ಕಾರ್ಕಳ ವಕೀಲರ ಸಂಘದ ಸದಸ್ಯರು ಉಪಸ್ಥಿತರಿದ್ದರು. ವಕೀಲರಾದ ಲೋಲಾಕ್ಷ ಕಾರ್ಯಕ್ರಮವನ್ನು ನಿರೂಪಿಸಿದರು, ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ನಿಟ್ಟೆ ಸ್ವಾಗತಿಸಿದರು ಮತ್ತು ಕೋಶಾಧಿಕಾರಿ ಅರುಣ್ ಕುಮಾರ್ ಶೆಟ್ಟಿ ವಂದಿಸಿದರು