ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಶಾಸಕ ಸುನಿಲ್ ಕುಮಾರ್ ಅವರಿಂದ ನಿತಿನ್ ಗಡ್ಕರಿಯವರಿಗೆ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಯ ಕುರಿತು ಕಾರ್ಕಳ ಶಾಸಕರು, ಮಾಜಿ ಸಚಿವರಾದ ವಿ.ಸುನಿಲ್ ಕುಮಾರ್ ಹಾಗೂ ನೂತನ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಇಂದು ದೆಹಲಿಯಲ್ಲಿ , ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಹೆದ್ದಾರಿಗಳ ಅಭಿವೃದ್ಧಿಯ ಕುರಿತು ಚರ್ಚಿಸಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಹಾಗೂ ಸಂಸದರಾದ ಬಿ.ವೈ ರಾಘವೇಂದ್ರ ಉಪಸ್ಥಿತರಿದ್ದರು.