ಸುಂದರ ಪುರಾಣಿಕ ಪ್ರೌಢಶಾಲೆ ಪೆರ್ವಾಜೆಯ ವಿದ್ಯಾರ್ಥಿನಿ ಭುವನೇಶ್ವರಿ

ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ಬಂಟ್ವಾಳ ತಾಲೂಕು ಇವರ ಸಹಯೋಗದಲ್ಲಿ ಅಕ್ಟೋಬರ್ 26ರಂದು ನಡೆದ ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಪಂದ್ಯಾಟದಲ್ಲಿ ಕಾರ್ಕಳ ಸುಂದರ ಪುರಾಣಿಕ ಪ್ರೌಢಶಾಲೆ ಪೆರ್ವಾಜೆ ಇಲ್ಲಿಯ ವಿದ್ಯಾರ್ಥಿನಿ ಕುಮಾರಿ ಭುವನೇಶ್ವರಿ ಪ್ರಥಮ ಸ್ಥಾನ ಪಡೆದು ಮುಂದೆ ಮಣಿಪುರ ಇಲ್ಲಿ ನಡೆಯುವಂತಹ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಎಸ್ ವಿ ಟಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಭಾವತಿ ಶೆಟ್ಟಿ , ಇವರಿಂದ ತರಬೇತಿ ಪಡೆದಿರುತ್ತಾರೆ.









