ರಾಜ್ಯಮಟ್ಟದ ಕುಸ್ತಿ ಪಂದ್ಯಾಟ, ವಿದ್ಯಾರ್ಥಿನಿ ರಿಷಾ ಜಿ. ಕೋಟ್ಯಾನ್ ತೃತೀಯ ಸ್ಥಾನ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ದಸರಾ ಕ್ರೀಡಾ ಉಪ ಸಮಿತಿ ಇವರು ಆಯೋಜಿಸಿರುವ ದಿನಾಂಕ 22-09-2025 ರಿಂದ 25-9-2025ರ ವರೆಗೆ ಚಾಮುಂಡಿ ವಿಹಾರ ಕ್ರೀಡಾಂಗಣ ಮೈಸೂರು ಇಲ್ಲಿ ನಡೆದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ಸಿಎಂ ಕಪ್ 2025 ವೈಯಕ್ತಿಕ 55 ಕೆ.ಜಿ. ವಿಭಾಗದ ಕುಸ್ತಿ ಪಂದ್ಯಾಟದಲ್ಲಿ ಭಾಗವಹಿಸಿ ಕಾರ್ಕಳ ಸುಂದರ ಪುರಾಣಿಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿಯ 10ನೇ ತರಗತಿ ವಿದ್ಯಾರ್ಥಿನಿ ರಿಷಾ ಜಿ. ಕೋಟ್ಯಾನ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಕ್ರೀಡಾ ಕ್ಷೇತ್ರದಲ್ಲಿ ಇವಳ ಮುಂದಿನ ಬದುಕು ಉಜ್ವಲವಾಗಲಿ ಎಂದು ಇವಳಿಗೆ ಹಾಗೂ ಇವಳ ಪೋಷಕರಿಗೆ ಸಂಸ್ಥೆಯ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಮುಖ್ಯಶಿಕ್ಷಕರು, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿವೃಂದ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.






















































