
ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಯೋಗ ಅಧ್ಯಾಪಕರಾದ ಅಶೋಕ್ ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ತಿಳಿಸುತ್ತಾ ಉದ್ಘಾಟಿಸಿದರು.ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಯೋಗಾಸನವನ್ನು ಪ್ರಾಯೋಗಿಕವಾಗಿ ಮಾಡಿಸುವುದರ ಮೂಲಕ ಪ್ರತಿದಿನದ ಯೋಗವು ಆರೋಗ್ಯ ಆಯುಷ್ಯವನ್ನು ಹೆಚ್ಚಿಸುತ್ತದೆ ಎಂಬ ಕಿವಿಮಾತನ್ನು ತಿಳಿಸಿದರು.ಶ್ರೀಮತಿ ಶಂಕರಿ ಭಟ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಹರಿಶ್ಚಂದ್ರ ಬಾಯರಿಯವರು ಧನ್ಯವಾದವನಿತ್ತರು.