
ಬೆಂಗಳೂರು: ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ನಂತಹ ಪ್ರಕರಣಗಳು ಕಂಡು ಬಂದರೆ ಯಾವುದೇ ಮುಲಾಜಿಲ್ಲದೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಈ ವಿಚಾರದ ಬಗ್ಗೆ ಭರವಸೆ ನೀಡಿದ್ದು ಮಹಿಳೆಯರ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ ಎಂದು ಹೇಳಿದರು.













