“ಮೈತ್ರಿ ನೋಡಿ ಜನ ಮತ ಚಲಾಯಿಸಿದ್ದಾರೆ, ಒಗ್ಗಟ್ಟಾಗಿ ಕೆಲಸ ಮಾಡೋಣ ಎನ್ನುವ ಮೂಲಕ NDA ಒಕ್ಕೂಟದಲ್ಲಿ ಉಳಿಯುವ ಸೂಚನೆ….!”

ನವದೆಹಲಿ: ಪ್ರಸ್ತುತ ರಾಜಕಾರಣದಲ್ಲಿ ಕಿಂಗ್ ಮೇಕರ್ ಆಗಿರುವ ಚಂದ್ರಬಾಬು ನಾಯ್ಡು ಸುದ್ದಿಗೋಷ್ಠಿ ನಡೆಸಿದ್ದು ಈ ವೇಳೆ ‘ನಾನು ಎನ್‌ಡಿಎ ಮೈತ್ರಿಕೂಟದಲ್ಲಿ ಇದ್ದೇನೆ, ಇಂದು ದೆಹಲಿಗೆ ಹೋಗಲಿದ್ದೇನೆ, ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ಭಾಗಿಯಾಗಲಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.
ಹೊಸ ಸರ್ಕಾರದಲ್ಲಿ ಸ್ಪೀಕರ್ ಸ್ಥಾನಕ್ಕೆ ಟಿಡಿಪಿ ಮುಖಂಡ ಚಂದ್ರಬಾಬು ನಾಯ್ಡು ಬೇಡಿಕೆ ಇರಿಸಿದ್ದು ಲೋಕಸಭೆಯಲ್ಲಿ ಟಿಡಿಪಿ ಪಕ್ಷದ ಸಂಸದರನ್ನ ಸ್ಪೀಕರ್ ಮಾಡಬೇಕು. ಸಂಪುಟದಲ್ಲಿ ಟಿಡಿಪಿಗೆ ಒಂದು ಅಥವಾ ಎರಡು ಸ್ಥಾನ ನೀಡಬೇಕು ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದ್ದಾರೆ.ಈ ಹಿಂದೆ ಜನರು ತಮ್ಮ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದಾರೆ. ಈ ಚುನಾವಣೆಯನ್ನು ಹೇಗೆ ವಿವರಿಸಬೇಕೆಂದು ನನಗೆ ತಿಳಿದಿಲ್ಲ, ನಮಗೆ ಸಿಕ್ಕಿರುವುದು ಅಧಿಕಾರವಲ್ಲ, ಜವಾಬ್ದಾರಿ, ಜನರು ದುರಹಂಕಾರ, ಸರ್ವಾಧಿಕಾರ ಸಹಿಸುವುದಿಲ್ಲ, ಜನ ತಕ್ಕ ಪಾಠ ಕಲಿಸಿದ್ದಾರೆ. ಐದು ವರ್ಷಗಳ ಕಾಲ ನಾವು ಅನೇಕ ಕಷ್ಟಗಳನ್ನು ಎದುರಿಸಿದ್ದೇವೆ. ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆದೆವು. ಜೈ ತೆಲುಗು ದೇಶಂ ಎಂದು ಘೋಷಣೆ ಕೂಗಿದ ಚಂದ್ರಯ್ಯ ಅವರಂತಹ ಕಾರ್ಯಕರ್ತರನ್ನು ಹೇಗೆ ಮರೆಯಲು ಸಾಧ್ಯ ಎಂದ ಚಂದ್ರಬಾಬು ನಾಯ್ಡು ತಮ್ಮ ಗೆಲುವಿಗಾಗಿ ದುಡಿದ ಕಾರ್ಯಕರ್ತರನ್ನು ಸ್ಮರಿಸಿಕೊಂಡರು.
ಮೈತ್ರಿ ನೋಡಿ ಜನ ಮತ ಚಲಾಯಿಸಿದ್ದಾರೆ. ಒಗ್ಗಟ್ಟಾಗಿ ಕೆಲಸ ಮಾಡೋಣ ಎಂದು ಪ್ರಧಾನಿ ನರೇಂದ್ರ ಮೋದಿಯವರ ಪೋಸ್ಟ್ ಗೆ ರಿಪೋಸ್ಟ್ ಮಾಡಿದ್ದು, ತಾವು NDA ಜೊತೆ ನಿಲ್ಲುವ ಸೂಚನೆ ಇದಾಗಿದೆ ಎನ್ನಲಾಗುತ್ತಿದೆ.