
ಬೇಸಿಗೆ ರಜೆಯ ನಂತರ ನಾಳೆ 01-06-2026 ರಿಂದ ಈ ಸಾಲಿನ ಶೈಕ್ಷಣಿಕ ವರ್ಷಾರಂಭಗೊಳ್ಳಲಿದ್ದು, ರಜೆಯಿಂದಾಗಿ ಶಾಲೆಯಲ್ಲಿ ಯಾವುದೇ ಚಟುವಟಿಕೆಗಳು ನಡೆಯದೆ ಇದ್ದುದರಿಂದ ನಾಳೆಯಿಂದ ಶಾಲೆಗೆ ಆಗಮಿಸುವ ಮಕ್ಕಳು ಧೂಳು, ಕಸಕಡ್ಡಿಗಳಿಲ್ಲದ ಸ್ವಚ್ಛಂದವಾದ ತರಗತಿ ಕೊಠಡಿಗಳಲ್ಲಿ ಕಲಿಕೆಯನ್ನು ಆರಂಭಿಸುವ ಸಲುವಾಗಿ ಕುಕ್ಕುಂದೂರು ಫ್ರೆಂಡ್ಸ್ (ರಿ.) ಕುಕ್ಕುಂದೂರು – ಮುಂಬೈ ಸಂಘದ ಸದಸ್ಯರು ಕುಕ್ಕುಂದೂರು ಶ್ರೀ ದುರ್ಗಾದೇವಿ ಸರ್ಕಾರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲಾ ತರಗತಿ ಕೊಠಡಿಗಳನ್ನು ಹಾಗೂ ಹೊರ ಆವರಣವನ್ನು ಸ್ವಚ್ಛಗೊಳಿಸಿದರು.
ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಸುಜಾತ ಎನ್. ರಾಜ್, ಕುಕ್ಕುಂದೂರು ಫ್ರೆಂಡ್ಸ್ ಅಧ್ಯಕ್ಷರಾದ ಶ್ರೀಮತಿ ಪುಷ್ಪಾ ಪ್ರಭು, ಉಪಾಧ್ಯಕ್ಷರಾದ ಶ್ರೀಮತಿ ಲಲಿತಾ ಶೆಟ್ಟಿ ಹಾಗೂ ಶಾಲೆಯ ಶಿಕ್ಷಕರಾದ ರಮೇಶ್ ನಾಯಕ್ ಅವರ ಮಾರ್ಗದರ್ಶನದಲ್ಲಿ ಶಾಲೆಯನ್ನು ಸ್ವಚ್ಛಗೊಳಿಸಲಾಯಿತು.




























