
ಕಾರ್ಕಳ : ಕುಕ್ಕುಂದೂರು ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಗೆ 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 100 ಶೇಕಡಾ ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ 59 ವಿದ್ಯಾರ್ಥಿಗಳಲ್ಲಿ 616 ಅಂಕ ಪಡೆದ ಆಯಿಫಾ ನಿದಾ ಸಂಸ್ಥೆಗೆ ಪ್ರಥಮ ಸ್ಥಾನಿಯಾದರೆ, 613 ಅಂಕ ಪಡೆದ ಮೋಹಿತ್ ಶೆಣೈ ದ್ವಿತೀಯ ಸ್ಥಾನಿಯಾಗಿದ್ದಾರೆ. 23 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ , 33 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ , 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಶೇಕಡಾ 100 ಫಲಿತಾಂಶಕ್ಕೆ ಕಾರಣರಾದ ವಿದ್ಯಾರ್ಥಿಗಳನ್ನು, ಶಿಕ್ಷಕರನ್ನು ಸಂಸ್ಥೆಯ ಅಧ್ಯಕ್ಷರಾದ ಕೆ.ಎಸ್.ಇಮ್ತಿಯಾಜ್ ಅಹಮ್ಮದ್‌ರವರು ಅಭಿನಂದಿಸಿದ್ದಾರೆ.