
ನವದೆಹಲಿ: 2025 ರ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷಾ ವೇಳಾಪಟ್ಟಿ ಪ್ರಕಟಗೊಂಡಿದ್ದು ಫೆ.15 ರಿಂದ ಪರೀಕ್ಷೆಗಳು ಆರಂಭವಾಗಲಿದೆ.
ಇತ್ತೀಚೆಗೆ CBSE 10 ಮತ್ತು 12 ನೇ ತರಗತಿಗಳಿಗೆ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವುದರ ಕುರಿತು ವಿವರಗಳನ್ನು ಬಿಡುಗಡೆ ಮಾಡಿದ್ದು 10 ನೇ ತರಗತಿಯ ಪ್ರಾಯೋಗಿಕ ಪರೀಕ್ಷೆಗಳು 2025ರ ಜ.1 ರಿಂದ ನಡೆಯಲಿದೆ. ಆದರೆ 12 ನೇ ತರಗತಿಯ ಪರೀಕ್ಷೆಗಳು ಫೆ.15 ರಂದು ಪ್ರಾರಂಭವಾಗುತ್ತವೆ ಎಂದು ಮಾಹಿತಿ ನೀಡಿತ್ತು.
ವೇಳಾಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳುವ ವಿಧಾನ:
ಹಂತ 1: cbse.gov.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ಕೊಡಿ.
ಹಂತ 2: ಮುಖಪುಟದಲ್ಲಿ, “Main Website” ಲಿಂಕ್ ಅನ್ನು ಕ್ಲಿಕ್ ಮಾಡಿ.
ಹಂತ 3: ಹೊಸ ಪುಟ ತೆರೆದುಕೊಳ್ಳುತ್ತದೆ. ಆಗ, ಬೋರ್ಡ್ ಪರೀಕ್ಷೆಗಳಿಗಾಗಿ X ಮತ್ತು XII ತರಗತಿಯ ದಿನಾಂಕದ ವೇಳಾಪಟ್ಟಿ 2025 (7.65 MB) 20/11/2024New_img ಮೇಲೆ ಕ್ಲಿಕ್ ಮಾಡಿ.
ಹಂತ 4: ಪಿಡಿಎಫ್ ತೆಗೆದುಕೊಳ್ಳುವಂತೆ ಸೂಚಿಸುತ್ತದೆ.
ಹಂತ 5: CBSE ಬೋರ್ಡ್ ಪರೀಕ್ಷೆಯ ವೇಳಾಪಟ್ಟಿ ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು.








































