
ಕಾರ್ಕಳ: ರಾಮನಗರ ಜಿಲ್ಲಾಡಳಿ, ಜಿಲ್ಲಾ ಪಂಚಾಯತ್ ರಾಮನಗರ, ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇವರ ಆಶ್ರಯದಲ್ಲಿ ರಾಮನಗರ ಜಿಲ್ಲೆಯಲ್ಲಿ ನಡೆದ ರಾಜ್ಯಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಸಾನ್ವಿ ಎಮ್ ನಾಯಕ್ ಬೆಳ್ಳಿ ಪದಕ ಮತ್ತು ರಿತು ಫ್ರಾನ್ಸಿಸ್ ಕಂಚಿನ ಪದಕ ಪಡೆದಿದ್ದಾರೆ .







