
ಖ್ಯಾತ ಗಾಯಕಿ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತೆ ಆಶಾ ಭೋಸ್ಲೆ ನಿಧನರಾಗಿದ್ದಾರೆ.
92 ವರ್ಷದ ಗಾಯಕಿ ಆಶಾ ಬೋಸ್ಲೆ ರವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ, ಎಪ್ರಿಲ್ 11ರಂದು ಮುಂಬೈನ ಬ್ರಿಚ್ ಕ್ಯಾಂಡಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಗಾಯಕಿ ನಿಧನರಾಗಿದ್ದಾರೆ. ಗಾಯಕಿ ಕೆಲವು ದಿನಗಳಿಂದ ಶ್ವಾಸಕೋಶದ ಇನ್ಫೆಕ್ಷನ್ ನಿಂದ ಬಳಲುತ್ತಿದ್ದರು.








