
ಮಂಗಳೂರು: ತೆಂಕು ಮತ್ತು ಬಡಗು ಎರಡು ತಿಟ್ಟಿನ ಪ್ರಸಿದ್ಧ ಯಕ್ಷಗಾನ ಮೇಳದಲ್ಲಿ ಪ್ರಧಾನ ಕಲಾವಿದರಾಗಿ 55 ವರ್ಷಗಳಿಗೂ ಹೆಚ್ಚು ಸೇವೆ ಸಲ್ಲಿಸಿದ, ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ಶನಿವಾರ ನಿಧನರಾಗಿದ್ದಾರೆ.
84 ವಯಸ್ಸಿನ ಇವರು ವಾಯು ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಕಿನ್ನಿಗೋಳಿಯ ಶಿಮಂತೂರು ಉದಯ ಗಿರಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇವರಿಗೆ ಯಕ್ಷಗಾನ ಕ್ಷೇತ್ರದಲ್ಲಿ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿದೆ.
















































