
ಚೆನ್ನೈ: ತಮಿಳುನಾಡಿನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಗೂಡ್ಸ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದ ಕಾರಣ ಬೋಗಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆಯಲ್ಲಿ ಹಲವು ಜನರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಕೊಂಡೊಯ್ಯಲಾಗುತ್ತಿದೆ. ಮೈಸೂರು-ದರ್ಭಾಂಗ್ ಎಕ್ಸ್‌ಪ್ರೆಸ್ ರೈಲು ಚೆನ್ನೈ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಗಳು ತಿಳಿಸಿವೆ.
ತಮಿಳುನಾಡು ಪೊಲೀಸರ ಪ್ರಕಾರ, ರೈಲಿನ ಕನಿಷ್ಠ ಎರಡು ಬೋಗಿಗಳು ಹಳಿ ತಪ್ಪಿವೆ. ರಕ್ಷಣಾ ತಂಡಗಳು ಮತ್ತು ಆಂಬ್ಯುಲೆನ್ಸ್‌ಗಳು ಅಪಘಾತದ ಸ್ಥಳಕ್ಕೆ ಧಾವಿಸಿವೆ. 12578 ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ ಕವರಾಯಪೆಟ್ಟೈಯಲ್ಲಿ ರಾತ್ರಿ 8.50 ಕ್ಕೆ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ಮತ್ತು ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.













