31.8 C
Udupi
Saturday, April 11, 2026
spot_img
spot_img
HomeBlogಗೃಹಲಕ್ಷ್ಮೀ ಹಣಕ್ಕೆ ಕೈ ಹಾಕಿದ ಫೈನಾನ್ಸ್ ಸಂಸ್ಥೆಗಳು: ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

ಗೃಹಲಕ್ಷ್ಮೀ ಹಣಕ್ಕೆ ಕೈ ಹಾಕಿದ ಫೈನಾನ್ಸ್ ಸಂಸ್ಥೆಗಳು: ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು: ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ಶಾಸಕ ದಿನೇಶ್ ಗೂಳಿಗೌಡ ಗೃಹಲಕ್ಷ್ಮೀ ಯೋಜನೆಯಡಿ ಮಹಿಳಾ ಫಲಾನುಭವಿಗಳ ಖಾತೆಗೆ ಜಮೆಯಾಗುವ ಸಹಾಯಧನವನ್ನು ಖಾಸಗಿ ಫೈನಾನ್ಸ್ ಹಾಗೂ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಳೆಯ ಸಾಲದ ಹೆಸರಿನಲ್ಲಿ ಬಲವಂತವಾಗಿ ಕಡಿತಗೊಳಿಸುತ್ತಿರುವ ಘಟನೆಗಳ ಬಗ್ಗೆ ಮನವಿ ಸಲ್ಲಿಸಿದ್ದು ಇದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂತಹ ಕ್ರಮಗಳನ್ನು ತಕ್ಷಣ ತಡೆಹಿಡಿಯಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ತುರ್ತು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ. ಈ ವಿಷಯವನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೂ ತಿಳಿಸಲಾಗಿದೆ.
ಮುಖ್ಯಮಂತ್ರಿಗಳ ಕಾರ್ಯದರ್ಶಿ ಮೂಲಕ ಗೃಹ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕೂಡ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಮನವಿ ಪತ್ರದಲ್ಲಿ ದಿನೇಶ್ ಗೂಳಿಗೌಡ ಅವರು, ಗೃಹಲಕ್ಷ್ಮೀ ಯೋಜನೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಬಹುಮುಖ್ಯವಾದ ಯೋಜನೆಯಾಗಿದ್ದು, ಪ್ರತಿ ತಿಂಗಳು ₹2,000 ಸಹಾಯಧನ ನೀಡಲಾಗುತ್ತಿದೆ. ಆದರೆ, ಕೆಲ ಖಾಸಗಿ ಫೈನಾನ್ಸ್ ಸಂಸ್ಥೆಗಳು ಮತ್ತು ಸ್ತ್ರೀಶಕ್ತಿ ಸಂಘಗಳು ಆ ಹಣವನ್ನು ಸಾಲದ ಬಾಕಿ ಅಥವಾ ಬಡ್ಡಿ ಹೆಸರಿನಲ್ಲಿ ಅನ್ಯಾಯವಾಗಿ ವಸೂಲಿ ಮಾಡುತ್ತಿರುವುದಾಗಿ ಅವರು ಆರೋಪಿಸಿದ್ದಾರೆ.

ಕೆಲವೆಡೆ ಬ್ಯಾಂಕ್ ಅಧಿಕಾರಿಗಳ ಮೇಲೆ ಒತ್ತಡ ಹೇರುವುದಲ್ಲದೆ, ಫಲಾನುಭವಿಗಳಿಗೆ ಬೆದರಿಕೆ ಹಾಕಿ ಹಣ ವಾಪಸು ಪಡೆಯುತ್ತಿರುವ ಘಟನೆಗಳೂ ವರದಿಯಾಗಿವೆ. ಇಂತಹ ಅಕ್ರಮಗಳಿಗೆ ತಡೆಹಾಕಿ, ಮಹಿಳೆಯರಿಗೆ ಸಲ್ಲಬೇಕಾದ ಸಹಾಯಧನ ಸುರಕ್ಷಿತವಾಗಿ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page