29.4 C
Udupi
Saturday, June 20, 2026
spot_img
spot_img
HomeBlogಗ್ಯಾರಂಟಿ ಯೋಜನೆ ದುರ್ಬಳಕೆ ತಡೆಗೆ ಸಿಎಂ ಖಡಕ್ ಸೂಚನೆ

ಗ್ಯಾರಂಟಿ ಯೋಜನೆ ದುರ್ಬಳಕೆ ತಡೆಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು: ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವವರು ಹಾಗೂ ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆದರೆ ಅರ್ಹ ಫಲಾನುಭವಿಗಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗಬಾರದು ಎಂದು ಸ್ಪಷ್ಟಪಡಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಹಲವು ಅಕ್ರಮಗಳು ಬೆಳಕಿಗೆ ಬಂದಿದ್ದು, ಗೃಹಲಕ್ಷ್ಮಿ ಹಣ ಸಾಲ ಖಾತೆಗಳಿಗೆ ಸ್ವಯಂಚಾಲಿತವಾಗಿ ವರ್ಗಾವಣೆಯಾಗುತ್ತಿರುವುದು, ಮೃತರ ಹೆಸರಲ್ಲಿಯೂ ಹಣ ಜಮೆಯಾಗುತ್ತಿರುವುದು ಮತ್ತು ಒಂದೇ ಖಾತೆಗೆ ಹಲವು ಪಾವತಿಗಳು ನಡೆದಿರುವುದು ಗಮನಕ್ಕೆ ಬಂದಿದೆ.

ಬೇರೆ ರಾಜ್ಯಗಳ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗುತ್ತಿರುವ ಪ್ರಕರಣಗಳನ್ನು ತಡೆಯಲು ಹಾಗೂ ಕರ್ನಾಟಕದ ಫಲಾನುಭವಿಗಳಿಗಷ್ಟೇ ಯೋಜನೆ ಸೀಮಿತವಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಫಲಾನುಭವಿಗಳಿಗೆ ಹಣ ಜಮಾ ಆದ ಕೂಡಲೇ ಮೊಬೈಲ್ ಮೂಲಕ ಮಾಹಿತಿ ಕಳುಹಿಸುವ ವ್ಯವಸ್ಥೆಯನ್ನೂ ಜಾರಿಗೊಳಿಸಲು ಸೂಚಿಸಲಾಗಿದೆ.

ಅನ್ನಭಾಗ್ಯ ಅಕ್ಕಿಯ ಅಕ್ರಮ ಮಾರಾಟ ತಡೆಗೂ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಆರ್ಥಿಕವಾಗಿ ಸುಸ್ಥಿತಿಯಲ್ಲಿರುವವರು ಸ್ವಯಂಪ್ರೇರಿತವಾಗಿ ಯೋಜನೆಗಳ ಸೌಲಭ್ಯ ತ್ಯಜಿಸಲು ಉತ್ತೇಜನ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page