
ವಿಧಾನಸಭೆ: ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಇಸ್ರೇಲ್–ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧದ ಪರಿಣಾಮವಾಗಿ ರಾಜ್ಯದಲ್ಲಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು ಆದರೂ ಪ್ರತಿ ಕುಟುಂಬಕ್ಕೂ ತಿಂಗಳಿಗೆ ಒಂದು ಎಲ್‌ಪಿಜಿ ಸಿಲಿಂಡರ್ ಪೂರೈಸಲಾಗುತ್ತದೆ ಎಂದು ಹೇಳಿದರು.
14 ಕೆ.ಜಿ. ಸಿಲಿಂಡರ್ ಸಾಮಾನ್ಯವಾಗಿ 4–5 ಮಂದಿ ಸದಸ್ಯರಿರುವ ಕುಟುಂಬಕ್ಕೆ ಸುಮಾರು 25 ದಿನಗಳಿಗಿಂತ ಹೆಚ್ಚು ಕಾಲ ಬಳಕೆಯಾಗುತ್ತದೆ. ಹೀಗಾಗಿ ಜನರು ಮಿತವಾಗಿ ಬಳಕೆ ಮಾಡಿ ಸರ್ಕಾರಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಮೇಲೆ ಮಾತ್ರ ನಿಯಂತ್ರಣ ಹೇರಲಾಗಿದ್ದು, ಆಸ್ಪತ್ರೆಗಳು, ಹಾಸ್ಟೆಲ್‌ಗಳು ಮತ್ತು ತುರ್ತು ಸೇವೆಗಳಿಗೆ ಆದ್ಯತೆಯಾಗಿ ಪೂರೈಕೆ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.









