
ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ 14 ವರ್ಷದ ಬಾಲಕಿ ಶ್ರೀನಂದಾ ಅವರ ಮೃತದೇಹ ಇಂದು ಪತ್ತೆಯಾಗಿದೆ. ಸುಮಾರು 2 ಸಾವಿರ ಅಡಿ ಆಳದ ಕಂದಕದಲ್ಲಿ ಶವ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಏಪ್ರಿಲ್ 7ರಂದು ಪ್ರವಾಸಿ ತಂಡದೊಂದಿಗೆ ಚಿಕ್ಕಮಗಳೂರಿಗೆ ಬಂದಿದ್ದ ಬಾಲಕಿ, ಇನಾಮು ದತ್ತಾತ್ರೇಯ ಪೀಠ ಮತ್ತು ಮಾಣಿಕ್ಯಧಾರಾ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ನಾಪತ್ತೆಯಾಗಿದ್ದರು. ಬಳಿಕ ಎಸ್ಡಿಆರ್ಎಫ್, ಅಗ್ನಿಶಾಮಕ ದಳ, ಪೊಲೀಸ್ ಹಾಗೂ ಎಎನ್ಎಫ್ ತಂಡಗಳು ಡ್ರೋನ್ ಮತ್ತು ಥರ್ಮಲ್ ಕ್ಯಾಮೆರಾ ಸಹಾಯದಿಂದ ಶೋಧ ಕಾರ್ಯ ನಡೆಸಿದ್ದವು.
ಮೂರು ದಿನಗಳ ತೀವ್ರ ಶೋಧದ ನಂತರ ಇಂದು ಮೃತದೇಹ ಪತ್ತೆಯಾಗಿದ್ದು, ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಕುರಿತು ಅನುಮಾನ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.








