ನಿಖಿಲ್ ಕುಮಾರಸ್ವಾಮಿ, ಭರತ್ ಬೊಮ್ಮಾಯಿ, ಅನ್ನಪೂರ್ಣ ತುಕಾರಾಂ ಗೆ ಮುನ್ನಡೆ

ಬೆಂಗಳೂರು: ಚನ್ನಪಟ್ಟಣ ಶಿಗ್ಗಾಂವಿ, ಸಂಡೂರು, ಉಪಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ ಎಂಟು ಗಂಟೆಗೆ ಆರಂಭಗೊಂಡಿದೆ.
ಸುಮಾರು 11 ಗಂಟೆಗೆ ಉಪಚುನಾವಣೆಯ ಫಲಿತಾಂಶ ಹೊರಬೀಳಲಿದೆ ಎನ್ನಲಾಗುತ್ತಿದೆ. ಸದ್ಯದ ಎಣಿಕೆಯ ಪ್ರಕಾರ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಕಾಂಗ್ರೆಸ್ ನ ಅನ್ನಪೂರ್ಣ , ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ ಎನ್ನಲಾಗಿದೆ.
ರಾಮನಗರದ ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಚನ್ನಪಟ್ಟಣ ಕ್ಷೇತ್ರದ ಮತ ಎಣಿಕೆ, ಹಾವೇರಿಯ ದೇವಗಿರಿ ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಗ್ಗಾಂವಿ ಕ್ಷೇತ್ರದ ಮತ ಎಣಿಕೆ ಬಳ್ಳಾರಿ ನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಡೂರು ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ.



















