
ಮೈಸೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾನುವಾರ ಸುದ್ದಿಗಾರರೊಡನೆ ಮಾತನಾಡಿ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸುವುದಿಲ್ಲ, ಆದರೆ ಕ್ಷೇತ್ರದಲ್ಲಿ ನನ್ನ ಹೆಸರೇ ಓಡಾಡುತ್ತಿದೆ, ಹೀಗಾಗಿ ನಾನೇ ಅಭ್ಯರ್ಥಿ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಹಿನ್ನಡೆ ಆಗಿತ್ತು. ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಹಿನ್ನಡೆ ಆಗಿತ್ತು. ಈಗ ಚನ್ನಪಟ್ಟಣದಲ್ಲಿ ನಮ್ಮ ಪಕ್ಷದ ಬುನಾದಿ ಬಲಗೊಳಿಸುತ್ತಿದ್ದೇವೆ. ನಮ್ಮ ಕೆಲಸವನ್ನು ಮೆಚ್ಚಿಕೊಂಡು ಮತದಾರರು ಮತ್ತು ಜನ ಕೈಹಿಡಿಯುವ ವಿಶ್ವಾಸವಿದೆ ಎಂದು ಹೇಳಿದರು.













