
ಮಣಿಪಾಲ: ಸೋಮವಾರ ಬೆಳಗ್ಗೆ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಶಾಲಾ ಬಸ್ ಚಾಲಕನಿಗೆ ಹಠಾತ್ ಎದೆನೋವು ಕಾಣಿಸಿಕೊಂಡ ಪರಿಣಾಮ ಬಸ್ ರಸ್ತೆ ಮಧ್ಯದ ಡಿವೈಡರ್ಗೆ ಢಿಕ್ಕಿ ಹೊಡೆದ ಘಟನೆ ನಡೆದಿದೆ.
ಮಾಧವ ಕೃಪಾ ಶಾಲೆಗೆ ಸೇರಿದ ಬಸ್ ಚಾಲಕ ಸುರೇಶ್ ಸಣ್ಣಕ್ಕಿಬೆಟ್ಟು (54) ಅಸ್ವಸ್ಥರಾದರೂ ವಾಹನವನ್ನು ನಿಯಂತ್ರಿಸಲು ಪ್ರಯತ್ನಿಸಿದ್ದಾರೆ. ಆದರೆ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದಿದೆ.
ಅದೃಷ್ಟವಶಾತ್ ಬಸ್ನಲ್ಲಿದ್ದ ವಿದ್ಯಾರ್ಥಿಗಳಿಗೆ ಯಾವುದೇ ಗಾಯಗಳಾಗಿಲ್ಲ. ಸ್ಥಳೀಯರು ಮತ್ತು ಶಾಲಾ ಸಿಬ್ಬಂದಿ ಕೂಡಲೇ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.

































