
ಚಿಕ್ಕಬಳ್ಳಾಪುರ: ಕಳೆದ ರಾತ್ರಿ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ.
ನಗರದ ಕಂದವಾರದಲ್ಲಿರುವ ಗೃಹ ಕಚೇರಿ ನಿವಾಸದ ಮೇಲೆ ಕಲ್ಲು ತೂರಾಟ ಮಾಡಲಾಗಿದ್ದು, ಮನೆಯ ಬೃಹತ್ ಗಾತ್ರದ ಕಿಟಕಿ ಗಾಜು ಪುಡಿಪುಡಿಯಾಗಿದೆ. ಕಳೆದ ರಾತ್ರಿ 10:30 ರಿಂದ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮನೆಗೆ ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ಹಾಗೂ ವೃತ್ತ ನಿರೀಕ್ಷಕ ಮಂಜುನಾಥ್ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಕಲ್ಲು ತೂರಾಟ ಮಾಡಿದವರ ಪತ್ತೆಗೆ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದು ಲೋಕಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಈ ಘಟನೆ ನಡೆದಿದೆ.