
ಕಾರ್ಕಳ :ಮಕ್ಕಳ ದಿನಾಚರಣೆ ಅಂಗವಾಗಿ ನಡೆದ 2025ನೆೇ ಸಾಲಿನ ತಾಲೂಕು ಮಟ್ಟದ ಉದಯವಾಣಿ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆಯಲ್ಲಿ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ ಐದನೇ ತರಗತಿ ವಿದ್ಯಾರ್ಥಿನಿ ಕುಮಾರಿ ಆಕಾಂಕ್ಷ ಕಾಮತ್ ಇವರು ಭಾಗವಹಿಸಿ, ಜೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.ಇವರಿಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭ ಹಾರೈಸಿದ್ದಾರೆ.






