
ಎಕ್ಸಿಟ್ ಪೋಲ್ ಭವಿಷ್ಯ ಕಾಂಗ್ರೆಸ್ ಪಾಳಯದಲ್ಲಿ ಸಂಚಲನವನ್ನು ಸೃಷ್ಟಿಸಿದ್ದು ಕಾಂಗ್ರೆಸ್ ಶಾಸಕರಲ್ಲಿ ಆತಂಕ ಶುರುವಾಗಿದೆ. ಹೀಗಾಗಿ ಆತಂಕದಲ್ಲಿರುವ ಕಾಂಗ್ರೆಸ್ ಶಾಸಕರಿಗೆ ಸಿಎಂ, ಡಿಸಿಎಂ ಅಭಯ ನೀಡಿದ್ದಾರೆ.
ಸಿಎಂ ಮತ್ತು ಡಿಸಿಎಂ ಸಿಎಲ್‌ಪಿ ಸಭೆಯಲ್ಲಿ ಶಾಸಕರಿಗೆ ಧೈರ್ಯವನ್ನು ಹೇಳಿದ್ದು ಎಕ್ಸಿಟ್ ಪೋಲ್ ನೋಡಿ ಧೃತಿಗೆಡುವ ಅವಶ್ಯಕತೆ ಇಲ್ಲ. ಯಾರು ಏನೇ ಹೇಳಲಿ, ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಗುಪ್ತಚರ ಇಲಾಖೆ ಮಾಹಿತಿ ಪ್ರಕಾರ, ಕಾಂಗ್ರೆಸ್‌ಗೆ 14ರಿಂದ 18 ಸ್ಥಾನ, ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಎರಡಂಕಿ ದಾಟುತ್ತೇವೆ. ನಾವು ಮಾಹಿತಿ ತರಿಸಿಕೊಂಡಿದ್ದೇವೆ, ಡೋಂಟ್ ವರಿ ಎಂದು ಸಿಎಂ ಹೇಳಿದ್ದಾರೆಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.






























































































































