
ಚಿಕ್ಕೋಡಿ (ಮೇ.1): ಕಾಗವಾಡ ವಿಧಾನಸಭಾ ಕ್ಷೇತ್ರದ ಶಾಸಕ ರಾಜು ಕಾಗೆ ಇದೀಗ ಚುನಾವಣೆ ಹೊತ್ತಲ್ಲಿ ಮತ್ತೊಂದು ಎಡವಟ್ಟು ಹೇಳಿಕೆ ನೀಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಲೀಡ್ ಕೊಡದಿದ್ರೆ ಕರೆಂಟು ಕೊಡಲ್ಲ ಮತದಾರರಿಗೆ ಬೆದರಿಕೆ ಹಾಕಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಮತ ಪ್ರಚಾರದ ವೇಳೆ ಮತದಾರರಿಗೆ ಬೆದರಿಕೆ ಹಾಕಿದ್ದಾರೆ. ಕಳೆದ ವಿಧಾನಸಭೆಯಲ್ಲಿ ಕಡಿಮೆ ಬಂದಿವೆ. ಕಳೆದ ಸಲ ಕಡಿಮೆ ಲೀಡ್ ಕೊಟ್ಟಿದ್ದಕ್ಕೆ ಕರೆಂಟು ಮಾತ್ರ ತೆಗೆಯುತ್ತಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಲೀಡ್ ಕೊಡದಿದ್ರೆ ಈ ಸಲ ಕರೆಂಟೇ ಕೊಡೊಲ್ಲ ಶಾಸಕ ರಾಜು ಕಾಗೆ ಬೆದರಿಕೆ ಒಡ್ಡಿದ್ದಾರೆ