30.9 C
Udupi
Wednesday, April 1, 2026
spot_img
spot_img
HomeBlogಚೈತ್ರಾ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರ ಮೊರೆ ಹೋದ ಬಾಲಕೃಷ್ಣ ನಾಯಕ್

ಚೈತ್ರಾ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರ ಮೊರೆ ಹೋದ ಬಾಲಕೃಷ್ಣ ನಾಯಕ್

ಕಳೆದ ಕೆಲ ದಿನಗಳಿಂದ ಚೈತ್ರಾ ಕುಂದಾಪುರ ಹಾಗೂ ಅವರ ತಂದೆ ಬಾಲಕೃಷ್ಣ ನಾಯಕ್ ನಡುವಿನ ಆರೋಪ ಪ್ರತ್ಯಾರೋಪಗಳು ಮುಂದುವರಿಯುತ್ತಿದ್ದು ಇದೀಗ ತಂದೆಯೇ ಮಗಳ ವಿರುದ್ಧ ಕೊಲೆ ಕೊಲೆ ಬೆದರಿಕೆ ಆರೋಪ ಮಾಡಿದ್ದಾರೆ ಎಂಬ ವಿಚಾರ ಹರಿದಾಡುತ್ತಿದೆ.

ಈ ಕುರಿತು ದೂರು ನೀಡಿರುವ ಬಾಲಕೃಷ್ಣ ನಾಯಕ್ “ಚೈತ್ರಾ ಅವರು ಗೆಳೆಯರ ಜೊತೆ ಮನೆಗೆ ಬಂದು ದೊಡ್ಡ ಮಟ್ಟದ ದುಡ್ಡಿನ ವ್ಯವಹಾರ ಮಾಡುತ್ತಿದ್ದರು. ಒಂದು ದಿನ ರಾತ್ರಿ ಕೋಟ್ಯಂತರ ರೂಪಾಯಿ ತಂದು ಎಣಿಸಿದ್ದನ್ನು ಕಂಡು ನಾನು ಭಯಗೊಡೆ. ಇದನ್ನು ಪ್ರಶ್ನಿಸಿದ್ದಕ್ಕೆ ನನಗೆ ಅವರು ದಬಾಯಿಸಿದರು. ಹೀಗಾಗಿ, ನಾನು ಮಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕೆಲಸಕ್ಕೆ ಸೇರಿದೆ. ಇದು ಗೋವಿಂದ ಪೂಜಾರಿ ಹಣ ಎಂಬ ವಿಚಾರ ನನಗೆ ಆ ಬಳಿಕ ತಿಳಿಯಿತು. ಈ ವಿಚಾರವನ್ನು ನಾನು ಎಲ್ಲಾದರೂ ಹೇಳಬಹುದು ಎಂಬ ಕಾರಣಕ್ಕೆ ನನ್ನ ಹೆಂಡತಿ ರೋಹಿಣಿ ಹಾಗೂ ನನ್ನ ಮಗಳಾದ ಚೈತ್ರ ನನಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಲು ಪ್ರಾರಂಭಿಸಿದರು.

ನನ್ನ ಮಗಳು ಆಕೆಯ ಸ್ನೇಹಿತನಾದ ಶ್ರೀಕಾಂತ್ ಅವರನ್ನು ಮದುವೆಯಾಗಲು ನಿರ್ಧರಿಸಿದ ವಿಷಯ ತಿಳಿದಾಗ ನಾನು ಅವಳ ಬಳಿ ಆತನನ್ನು ಮದುವೆ ಆಗುವುದು ಸರಿಯಲ್ಲ, ಆತ ಸರಿಯಿಲ್ಲ ಎಂದು ಹೇಳಿದೆ. ನನ್ನ ಮಗಳು ಚೈತ್ರಾ ನನ್ನ ಬಳಿ ಒಂದು ವೇಳೆ ಆತನನ್ನು ಬಿಟ್ಟು ಬೇರೆ ಹುಡುಗನನ್ನು ಮದುವೆಯಾಗುವುದಾದರೆ ನನಗೆ 5 ಲಕ್ಷ ರೂಪಾಯಿ ನೀಡಬೇಕು ಎಂದು ಒತ್ತಾಯಿಸಿದಳು. ಇದರಲ್ಲಿ ನನ್ನ ಪತ್ನಿ ರೋಹಿಣಿ ಕೂಡ ಶಾಮೀಲಿದ್ದಾಳೆ.

ಮದುವೆಗೆ ಬರದೇ ಹೋದರೆ ಭೂಗತ ದೊರೆಗಳ ಮೂಲಕ ಕೊಲೆಗೈಯ್ಯುವ ಬೆದರಿಕೆ ಹಾಕಿದ್ದಾಳೆ. ಆಸ್ತಿಗಾಗಿ ಯಾವ ಹೇಯ ಕೃತ್ಯವನ್ನು ಎಸಗಲು ಅವಳು ಸಿದ್ಧಳಿದ್ದಾಳೆ. ನಾನು ಸತ್ತು ಹೋಗಿದ್ದೇನೆ ಎಂದು ಹೇಳಿಕೊಂಡು ಬರುತ್ತಿದ್ದಾಳೆ. ನನಗೆ ರಕ್ಷಣೆ ನೀಡಿ” ಎಂದು ಬಾಲಕೃಷ್ಣ ದೂರಿನಲ್ಲಿ ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page