
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಐವರು ಉಗ್ರರು ಬಲಿಯಾಗಿದ್ದು, ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.
ಭದ್ರತಾ ಪಡೆ ಸಿಬ್ಬಂದಿ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಬುಧವಾರ ರಾತ್ರಿ ಜಿಲ್ಲೆಯ ಬೆಹಿಬಾಗ್ ಪ್ರದೇಶದ ಕಡ್ಡರ್‌ನಲ್ಲಿ ಶಂಕಿತ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿ ಪಡೆದ ತಕ್ಷಣ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.
ಗುರುವಾರ ಮುಂಜಾನೆ ಭಯೋತ್ಪಾದಕರು ಏಕಾಏಕಿ ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿ ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಈ ವೇಳೆ ಇಬ್ಬರು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದು ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಮಾಹಿತಿ ನೀಡಿದೆ.