
ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕದೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗುಪ್ತಚರ ಇಲಾಖೆ ನೀಡಿದ ಮಾಹಿತಿಯ ಆಧಾರದ ಮೇಲೆ ಜಮ್ಮು ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಕಥುವಾದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಸೇನಾಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.













